ಲೋಕಬಂಧು ನ್ಯೂಸ್ ನವದೆಹಲಿ, ಜು.24
ನೀಟ್ ಪ್ರಶ್ನೆ ಪತ್ರಿಕೆ ಅಕ್ರಮದ ವಿರುದ್ಧ ತೀವ್ರ ಪ್ರತಿಭಟನೆ ನಡೆಯುತ್ತಿರುವ ಬೆನ್ನಲೇ ಪ್ರಧಾನಿ ಮೋದಿ ಅವರು ದೊಡ್ಡ ಘೋಷಣೆ ಮಾಡಿದ್ದು, ಈ ಪ್ರಕರಣದ ತನಿಖೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ ಮಾಡುವುದಾಗಿ ತಿಳಿಸಿದ್ದಾರೆ.ಈ ಬಗ್ಗೆ ವೀಡಿಯೊ ಹಂಚಿಕೊಂಡಿರುವ ಅವರು, ಶುಕ್ರವಾರ ನಡೆಯುವ ಸಚಿವ ಸಂಪುಟದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ತನಿಖೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ ಮತ್ತು ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮಸೂದೆ ಬಗ್ಗೆ ಚರ್ಚೆ ನಡೆಯಲಿದೆ. ಪ್ರಶ್ನೆಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರು ಸಂಕಷ್ಟ ಅನುಭವಿಸಿದ್ದಾರೆ. ಈ ಮಸೂದೆಗೆ ಸಂಸತ್ತಿನ ಅನುಮೋದನೆ ಪಡೆಯಲು ಸರ್ಕಾರ ಎಲ್ಲ ಪ್ರಯತ್ನ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.