ಆಯುಷ್ಮಾನ್ ಯೋಜನೆ ಸಮಸ್ಯೆ ಸರಿಪಡಿಸಿ

ಲೋಕಬಂಧು ನ್ಯೂಸ್ | ಮಣಿಪಾಲ, ಜು.1
ಕೆಎಂಸಿ ಮಣಿಪಾಲ ಆಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಅಸಮರ್ಪಕತೆ ಕುರಿತು ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ನೀಡಲಾಗಿದ್ದು, ಸಮಸ್ಯೆ ಸರಿಪಡಿಸುವಂತೆ ಆಗ್ರಹಿಸಲಾಯಿತು.
ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಆಯುಷ್ಮಾನ್ ಯೋಜನೆಯ ಪ್ರಯೋಜನ ಪಡೆಯುವಲ್ಲಿ ಜನಸಾಮಾನ್ಯರು ಪರದಾಡುತ್ತಿದ್ದು, ಒಂದು ವಾರದೊಳಗೆ ಸಮಸ್ಯೆ ಪರಿಹರಿಸುವಂತೆ ತಪ್ಪಿದಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.


ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಭಿರಾಜ್ ಸುವರ್ಣ, ಪ್ರದೀಪ್ ಕುಂದರ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಗುರುರಾಜ್ ಮಾಡ, ಗಜೇಂದ್ರ ಎಸ್. ಬೆಳಮನೆ, ಕಾರ್ಯದರ್ಶಿಗಳಾದ ರಾಕೇಶ್ ಅಮೀನ್ ಕಾರ್ಕಳ ಮೊದಲಾದವರಿದ್ದರು.