ಲೋಕಬಂಧು ನ್ಯೂಸ್ | ಮಂಗಳೂರು, ಜು.7
ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 8ರಂದು ಬುಧವಾರ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಹಾಗಾಗಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ವಸತಿಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಮಂಗಳವಾರ ಆದೇಶ ಹೊರಡಿಸಿದ್ದಾರೆ.
ಈ ಆದೇಶ ಉಲ್ಲಂಘಿಸಿದಲ್ಲಿ 2005ರ ವಿಪತ್ತು ನಿರ್ವಹಣೆ ಕಾಯ್ದೆಯ ಕಲಂ 51ಬಿ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.