ಲೋಕಬಂಧು ನ್ಯೂಸ್ ಮಂಗಳೂರು, ಜು.2
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸಣ್ಣಗೆ ಸುರಿಯುತ್ತಿದ್ದ ಮಳೆ ಬುಧವಾರ ಅಬ್ಬರಿಸಿದೆ. ಕಳೆದ ರಾತ್ರಿಯಿಂದ ಭಾರಿ ಮಳೆಯಾಗುತ್ತಿದ್ದು, ಜು.2ರಂದು ಜಿಲ್ಲೆಯಾದ್ಯಂತ ರೆಡ್ ಆಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು.2ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶ ನೀಡಿದ್ದಾರೆ.ನಿರಂತರ ಮಳೆಗೆ ಜಿಲ್ಲೆಯಾದ್ಯಂತ ವ್ಯಾಪಕ ಹಾನಿಯಾಗಿದ್ದು ಅಲ್ಲಲ್ಲಿ ಮನೆ ಕುಸಿತ, ಗೋಡೆ ಕುಸಿತ, ಮರಗಳು ಉರುಳಿ ಸಂಚಾರ ವ್ಯತ್ಯಯವಾಗಿರುವ ಘಟನೆ ವರದಿಯಾಗಿದೆ.
ಬಂಟ್ವಾಳ ತಾಲೂಕಿನಲ್ಲಿ ಕಳೆದೆರಡು ದಿನಗಳ ಗಾಳಿ ಮಳೆಗೆ ವಿವಿಧ ಕಡೆಗಳಲ್ಲಿ ಮರ ಬಿದ್ದು ಮನೆಗಳಿಗೆ ಹಾನಿಯಾದ ಘಟನೆ ಸಂಭವಿಸಿದೆ.