ಹಾಪ್'ಕಾಮ್ಸ್‌ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ಮೃತ್ಯು

ಲೋಕಬಂಧು ನ್ಯೂಸ್ | ಮಂಗಳೂರು, ಜು.22
ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಮಂತ್ರಾಲಯ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರು ಹಾಪ್'ಕಾಮ್ಸ್‌ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ (43) ಸಾವನ್ನಪ್ಪಿದ್ದಾರೆ.
ರವಿ ಶೆಟ್ಟಿ ಅವರು ತಮ್ಮ ಸ್ನೇಹಿತರೊಂದಿಗೆ ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿ ದರ್ಶನಕ್ಕೆ ತೆರಳಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಅವರ ಕಾರು ನಿಯಂತ್ರಣ ತಪ್ಪಿ ಡಿವೈಡರ್'ಗೆ ಢಿಕ್ಕಿ ಹೊಡೆದ ಪರಿಣಾಮ ರವಿ ಶೆಟ್ಟಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.


ಗಾಯಗೊಂಡವರನ್ನು ಮಂಗಳೂರಿನ ಪ್ರದೀಪ್‌ ಆಳ್ವ, ಪುರುಷೋತ್ತಮ ಭಂಡಾರಿ, ಸಿಎ ಸುಧೇಶ್ ರೈ ಎಂದು ಗುರುತಿಸಲಾಗಿದೆ.


ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


ರವಿ ಶೆಟ್ಟಿ ಅವರು ಪಟ್ಲ ಯಕ್ಷಧ್ರುವ ಫೌಂಡೇಶನ್ ಜೊತೆ ಕಾರ್ಯದರ್ಶಿ, ಉರ್ವ ಬಂಟರ ಸಂಘದ ಅಧ್ಯಕ್ಷರಾದ್ದರು.


ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳನ್ನು ಆಗಲಿದ್ದಾರೆ.