ಲೋಕಬಂಧು ನ್ಯೂಸ್ ಕುಂದಾಪುರ, ಜು.15
ಸಿದ್ದಾಪುರ ಭಾಗದ 'ವಿಜಯ ಕರ್ನಾಟಕ' ವರದಿಗಾರ ನಾಗೇಶ್ ಗಾಣಿಗ ನೇರಳಕಟ್ಟೆ ಹೃದಯಾಘಾತದಿಂದ ಬುಧವಾರ ನಿಧನರಾದರು. ಅವರಿಗೆ 40 ವರ್ಷ ವಯಸ್ಸಾಗಿತ್ತು.
ತನ್ನ ವರದಿಗಾರಿಕೆಯಿಂದ ಸ್ಥಳೀಯವಾಗಿ ಗುರುತಿಸಿಕೊಂಡಿದ್ದ ನಾಗೇಶ್ ಗಾಣಿಗ ಅವರು ಕುಂದಾಪುರ ತಾಲೂಕು ಹಾಗೂ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿದ್ದರು.