ಪತ್ರಕರ್ತ ಶಿಜಿತ್‌'ಗೆ ಪಿತೃ ವಿಯೋಗ

ಲೋಕಬಂಧು ನ್ಯೂಸ್ | ಉಡುಪಿ, ಜು.10
ಮೂಡಬೆಟ್ಟು ನಿವಾಸಿ ಸುರೇಶ್‌ ಕೆ. ಅಲ್ಪಕಾಲದ ಅಸೌಖ್ಯದಿಂದ ಜು.9ರಂದು ನಿಧನರಾದರು. ಅವರಿಗೆ 72 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಪುತ್ರ ಪತ್ರಕರ್ತ ಶಿಜಿತ್‌ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.


ಜು.11ರಂದು ಶನಿವಾರ ಮಧ್ಯಾಹ್ನ 12 ಗಂಟೆಗೆ ಅಂತಿಮ ದರ್ಶನಕ್ಕೆ ಮೂಡಬೆಟ್ಟು ಮನೆಯಲ್ಲಿ ಅವಕಾಶ ನೀಡಲಾಗಿದ್ದು, ಬಳಿಕ ಬೀಡಿನಗುಡ್ಡೆ ರುದ್ರಭೂಮಿಯಲ್ಲಿ ಮಧ್ಯಾಹ್ನ 1 ಗಂಟೆಗೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.