ಕಾಪು ಹೊಸಮಾರಿಗುಡಿ ಸನ್ನಿಧಿಗೆ ನ್ಯಾಯಾಧೀಶೆ ದೀಪಾ ಕೆ.ಆರ್. ಭೇಟಿ

ಲೋಕಬಂಧು ನ್ಯೂಸ್ ಕಾಪು, ಜು.2
ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಪ್ರಥಮ ದರ್ಜೆಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ದೀಪಾ ಕೆ. ಆರ್. ಕುಟುಂಬ ಸಮೇತರಾಗಿ ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಮಾರಿಯಮ್ಮ ದೇವಿ ದರುಶನ ಪಡೆದು ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು.ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ಮಾತೃವೈಭವ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ಮತ್ತು ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ, ಕಾಪು ಪುರಸಭಾ ವ್ಯಾಪ್ತಿಯ ವಾರ್ಡ್ ಸಮಿತಿ ಪ್ರಧಾನ ಸಂಚಾಲಕ ಶ್ರೀಕರ್ ಶೆಟ್ಟಿ ಕಲ್ಯಾ, ಸಂತೋಷ ಶೆಟ್ಟಿ ತೆಂಕರಗುತ್ತು, ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಮೊದಲಾದವರಿದ್ದರು.