ಲೋಕಬಂಧು ನ್ಯೂಸ್ | ಮೂಡುಬಿದಿರೆ, ಜು.9
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಜುಲೈ 10 ಮತ್ತು 11ರಂದು ಸಂಜೆ 6.30ರಿಂದ ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ ಕನ್ನಡ ಗಾನ ಗುಚ್ಛ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಪ್ರಸ್ತುತಪಡಿಸುವ ಈ ಗಾನ ಗುಚ್ಛವನ್ನು ರಂಗನಿರ್ದೇಶಕ ಡಾ. ಜೀವನ್ ರಾಮ್ ಸುಳ್ಯ ಸಂಯೋಜಿಸಿದ್ದಾರೆ.
ಕನ್ನಡದ ವಿವಿಧ ಪ್ರಾಕಾರಗಳ ವೈವಿಧ್ಯಮಯ ಹಾಡುಗಳನ್ನು ರಂಗಸಾಧ್ಯತೆಗಳ ಮೂಲಕ ಪ್ರಸ್ತುತಪಡಿಸುವ ಎರಡು ಗಂಟೆಗಳ ವಿಶೇಷ ಕಾರ್ಯಕ್ರಮ ಇದಾಗಿದ್ದು ತಂಡದಲ್ಲಿ ಡಾ.ಜೀವನ್ ರಾಮ್ ಸುಳ್ಯ, ಮಮತಾ ಕಲ್ಮಕಾರು, ಮನುಜ ನೇಹಿಗ ಸುಳ್ಯ, ಸಮನ್ವಿತ ಹುಬ್ಬಳ್ಳಿ, ಸತ್ಯಜಿತ್ ರಾವ್, ಸತೀಶ್ ಸುರತ್ಕಲ್, ಸಂತೋಷ್ ಉಡುಪಿ, ತೇಜಸ್ವಿನಿ ತರೀಕೆರೆ, ನಿಶ್ಮಿತಾ ಬೆಂಗಳೂರು, ವಿಸ್ಮಯ ಪೈ, ಸಿಂಚನಾ ಶೆಟ್ಟಿ, ಕೃಪಾ ನಾಯಕ್ ಮೊದಲಾದವರು ಭಾಗವಹಿಸಲಿದ್ದಾರೆ.
ಸಭಾ ಕಾರ್ಯಕ್ರಮ ಇಲ್ಲ
ಯಾವುದೇ ಸಭಾ ಕಾರ್ಯಕ್ರಮ ಇರುವುದಿಲ್ಲ ಮತ್ತು ಕಾರ್ಯಕ್ರಮ ಸಮಯಕ್ಕೆ ಸರಿಯಾಗಿ ಆರಂಭವಾಗಲಿದೆ ಎಂದು ಸಂಸ್ಥೆ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ತಿಳಿಸಿದ್ದಾರೆ.
.jpg)
.jpg)