ಲಕ್ಷ್ಮೀವರತೀರ್ಥ ಆರಾಧನೆ: ತರಕಾರಿ ‌ಮುಹೂರ್ತ

ಲೋಕಬಂಧು ನ್ಯೂಸ್ ಉಡುಪಿ, ಜು.21
ಶೀರೂರು ಮಠದ ಪೂರ್ವ ಯತಿ ಶ್ರೀಲಕ್ಮೀವರ ತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನೆ ಪ್ರಯುಕ್ತ ಸೋಮವಾರ ಶ್ರೀಕೃಷ್ಣ ಮಠದಲ್ಲಿ ದೇವತಾ ಪ್ರಾರ್ಥನೆ ಹಾಗೂ ಭೋಜನಶಾಲೆಯಲ್ಲಿ ತರಕಾರಿ ಮುಹೂರ್ತ ಪರ್ಯಾಯ ಶೀರೂರು ಪೀಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನ ಡಾ.ಉದಯ ಕುಮಾರ್ ಸರಳತ್ತಾಯ ಹಾಗೂ ಪಾರುಪತ್ಯೆಗಾರ ಶ್ರೀಶ ಭಟ್ ಕಡೆಕಾರು ಇದ್ದರು.