ಹಿರಿಯಡಕ ಸಮೀಪದ ಪುತ್ತಿಗೆ ಮೂಲ ಮಠದಲ್ಲಿ ವಾರ್ಷಿಕ ಮಹಾಭಿಷೇಕ ಪ್ರಯುಕ್ತ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಶುಕ್ರವಾರ ಪಟ್ಟದದೇವರಿಗೆ ಪಂಚಾಮೃತ ಅಭಿಷೇಕ ನಡೆಸಿ, ವಿಶೇಷ ಪೂಜೆ ನೆರವೇರಿಸಿದರು.
ಶನಿವಾರ (ಜು.25) ತಪ್ತ ಮುದ್ರಾಧಾರಣೆ ನಡೆಯಲಿದ್ದು, ಉಭಯ ಶ್ರೀಪಾದರು ಪುತ್ತಿಗೆ ಮೂಲಮಠದಲ್ಲಿ ಬೆಳಿಗ್ಗೆ 7.30ರಿಂದ ಮಧ್ಯಾಹ್ನ 12ರ ವರೆಗೆ ಹಾಗೂ ಅಪರಾಹ್ನ 3ರಿಂದ 6ರ ವರೆಗೆ ತಪ್ತ ಮುದ್ರಾಧಾರಣೆ ನೆರವೇರಿಸುವರು.