ಬೆಳ್ಳಂಬೆಳಗ್ಗೆ ಗುಂಡಿಕ್ಕಿ ವ್ಯಕ್ತಿಯ ಹತ್ಯೆಗೈದು ಆರೋಪಿ ಪರಾರಿ

ಲೋಕಬಂಧು ನ್ಯೂಸ್ | ಕುಂದಾಪುರ, ಜು.31
ಇಲ್ಲಿನ ಹೋಲಿ ರೋಸಾರಿಯೊ  ಚರ್ಚ್ ಮುಂಭಾಗದ ರಸ್ತೆಯಲ್ಲಿ ಉದ್ಯಮಿಯೊಬ್ಬರನ್ನು ಪಿಸ್ತೂಲ್‌ನಿಂದ ಗುಂಡಿಕ್ಕಿ ಹತ್ಯೆಗೈದ ಘಟನೆ ಶುಕ್ರವಾರ ನಸುಕಿನ ವೇಳೆ ನಡೆದಿದೆ.
ಬಾರ್ಕೂರು ಕಚ್ಚೂರಿನ ಐವನ್ ರಿಚರ್ಡ್ ಮಸ್ಕರೇನಸ್ (45) ಕೊಲೆಯಾದವರು. ಪಿಸ್ತೂಲ್‌ನಿಂದ ಗುಂಡು ಹಾರಿಸಿದ ಬಳಿಕ ಆರೋಪಿ ಪರಾರಿಯಾಗಿದ್ದಾನೆ.


ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡ ಅವರು ತಮ್ಮ ಕಾರಿನ ಸಮೀಪ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್ ಶಂಕ‌ರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ಡಿವೈಎಸ್‌ಪಿ ಎಚ್.ಡಿ. ಕುಲಕರ್ಣಿ ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.