ಹಸ್ತಪ್ರತಿ ಸಂರಕ್ಷಣೆ ಮಹತ್ವದ ಕಾರ್ಯ

ಲೋಕಬಂಧು ನ್ಯೂಸ್ | ಮಣಿಪಾಲ, ಜು.14
ಹಸ್ತಪ್ರತಿಗಳ ಸಂರಕ್ಷಣೆ ನಮ್ಮ ಶ್ರೀಮಂತ, ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ಉಳಿಸಲು ಕೈಗೊಳ್ಳುವ ಮಹತ್ವದ ಕಾರ್ಯ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದ್ದಾರೆ.
ಮಣಿಪಾಲ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಜ್ಞಾನ ಭಂಡಾರ ಹಸ್ತಪ್ರತಿಗಳು ಮತ್ತು ಡಿಜಿಟಲೀಕರಣ ಅಧಿನಿಯಮ 2026ರ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಹಳೆಯ ತಾಳೆಗರಿಗಳು ಹಾಗೂ ಅಮೂಲ್ಯ ಹಸ್ತಪ್ರತಿಗಳು ನಶಿಸಿಹೋಗದಂತೆ ತಡೆಯಲು ಜ್ಞಾನ ಭಾರತಂ ಮಿಶನ್ ಯೋಜನೆಯಡಿ ತಂತ್ರಜ್ಞಾನದ ಆಧುನಿಕ ಮೂಲಕ ಡಿಜಿಟಲ್ ರೂಪಾಂತರ ಮಾಡಲಾಗುತ್ತಿದೆ. ಜಿಲ್ಲೆಯ ಜನತೆ ಸಹಕರಿಸಬೇಕು ಎಂದರು.


ಪೌರಾಯುಕ್ತ ಮಹಾಂತೇಶ್ ಹಂಗರಗಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ, ವಿಂದ್ಯಾ ಎನ್.ಎಂ., ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಧನಲಕ್ಷ್ಮೀ, ಜಿಲ್ಲಾ ವಿಶ್ವಕರ್ಮ ಕಾರ್ಪೆಂಟರ್ ಅಸೋಸಿಯೇಷನ್ ಅಧ್ಯಕ್ಷ ಹರೀಶ್ ಆಚಾರ್ಯ, ಆಯುಷ್ ಫೆಡರೇಶನ್ ಆಫ್ ಇಂಡಿಯಾ ಜಿಲ್ಲಾ ಅಧ್ಯಕ್ಷ ಡಾ.ಟಿ.ಎನ್.ಅಂಚನ್, ಸಾಲಿಗ್ರಾಮ ವಲಯ ಬ್ರಾಹ್ಮಣರ ಸಂಘದ ಅಧ್ಯಕ್ಷ ಪಟ್ಟಾಭಿರಾಮ ಸೋಮಯಾಜಿ ಉಪಸ್ಥಿತರಿದ್ದರು.