ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರು ರತ್ನಾಕರ ಹೆಗ್ಡೆ

ಲೋಕಬಂಧು ನ್ಯೂಸ್ ಕಾಪು, ಜು.20
ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಉಡುಪಿಯ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಆಯ್ಕೆಯಾಗಿದ್ದಾರೆ.ಮೂಲ್ಕಿ ಸುಂದರರಾಮ್ ಶೆಟ್ಟಿ ಪ್ರಥಮ ದರ್ಜೆ ಕಾಲೇಜು, ಹಿಂದೂ ಜೂನಿಯರ್ ಕಾಲೇಜು, ಹಿಂದೂ ಪ್ರೌಢಶಾಲೆ, ಹಿಂದೂ ಹಿರಿಯ ಪ್ರಾಥಮಿಕ ಶಾಲೆ, ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ ಕುತ್ಯಾರು, ವಿದ್ಯಾವರ್ಧಕ ಸೆಂಟ್ರಲ್ ಸ್ಕೂಲ್ ( ಸಿಬಿಎಸ್.ಸಿ) ಮುಂತಾದ ಶಿಕ್ಷಣ ಸಂಸ್ಥೆಗಳು ಶಿರ್ವ ವಿದ್ಯಾವರ್ಧಕ ಸಂಘ ಹೊಂದಿದೆ.


ಮಟ್ಟಾರು ಅವರು ಕರ್ನಾಟಕ ಸರಕಾರದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ, ಬಿಜೆಪಿಯ ಉಡುಪಿ ಜಿಲ್ಲಾಧ್ಯಕ್ಷರಾಗಿ, ಉಡುಪಿ ವಕೀಲರ ಸಂಘದ ಅಧ್ಯಕ್ಷರಾಗಿ, ಹುಬ್ಬಳಿಯ ಕಾನೂನು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ, ಉಡುಪಿ ಎಪಿಎಮ್.ಸಿ. ಅಧ್ಯಕ್ಷರಾಗಿ, ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ನಿರ್ದೇಶಕರಾಗಿ, ಅನೇಕ ದೇವಸ್ಥಾನ, ದೈವಸ್ಥಾನಗಳ ಜೀರ್ಣೋದ್ಧಾರ ಕಾರ್ಯಗಳನ್ನು ಮಾಡಿದ್ದು ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.