ಬಾರ್ಕೂರಿನ‌‌ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಸಚಿವ ಖಾದರ್ ಭೇಟಿ

ಲೋಕಬಂಧು ನ್ಯೂಸ್ ಬ್ರಹ್ಮಾವರ, ಜು.22
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು.ಟಿ. ಖಾದರ್ ಮಂಗಳವಾರ ಬಾರ್ಕೂರಿಗೆ ಭೇಟಿ ನೀಡಿ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.ಐತಿಹಾಸಿಕ ಪ್ರಸಿದ್ದಿಯ ಬಾರ್ಕೂರಿನ ಮಾಲಿಕ್ ದೀನರ್‌ ಮಸೀದಿಗೆ ಭೇಟಿ ನೀಡಿ ಧಾರ್ಮಿಕ ಮುಖಂಡರೊಂದಿಗೆ ಮಾತುಕತೆ ನಡೆಸಿದರು. ಬಳಿಕ ಸೇಂಟ್ ಪೀಟರ್ಸ್‌ ಚರ್ಚ್‌ಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.ನಂತರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.ಸಚಿವರ ಭೇಟಿಯ ವೇಳೆ ಸ್ಥಳೀಯ ಮುಖಂಡರು, ಧಾರ್ಮಿಕ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.