ಲೋಕಬಂಧು ನ್ಯೂಸ್ | ಉಡುಪಿ, ಜು.8
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆಯನ್ನು ಗರ್ಭಿಣಿಯಾಗಿಸಿದ ಆಘಾತಕಾರಿ ಘಟನೆ ಉಡುಪಿಯಲ್ಲಿ ವರದಿಯಾಗಿದ್ದು, ಆ ಸಂಬಂಧ ಮೂವರ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಿಂದ ಉಡುಪಿಗೆ ಕೆಲಸ ಹುಡುಕಿಕೊಂಡು ಬಂದಿದ್ದ ಅಪ್ರಾಪ್ತೆಗೆ ಮದುವೆಯಾಗುವುದಾಗಿ ಆರೋಪಿಗಳು ಭರವಸೆ ನೀಡಿ, ಕಳೆದ ಡಿಸೆಂಬರ್ ತಿಂಗಳಿನಿಂದ ಒಬ್ಬರಾದ ಮೇಲೊಬ್ಬರಂತೆ ಮತ್ತೊಬ್ಬರು ಬಾಲಕಿಯ ಅಸಹಾಯಕತೆಯನ್ನು ದುರ್ಬಳಕೆ ಮಾಡಿಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ.
ಸದ್ಯ ಬಾಲಕಿ 7 ತಿಂಗಳ ಗರ್ಭಿಣಿಯಾಗಿದ್ದು, ಆಪ್ತರ ಸಹಾಯದೊಂದಿಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾಳೆ.
ಅಸ್ಸಾಂ ಮೂಲದ ಕುಶಾಲ್, ರಾಜೇಶ್ ಹಾಗೂ ಕೌಶಲ್ ಎಂಬ ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಸ್ತುತ ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
