ಕಾಪು ಹೊಸಮಾರಿಗುಡಿ ಸನ್ನಿಧಿಗೆ ಸಂಸದ ಶ್ರೀಕಾಂತ್ ಶಿಂಧೆ ಭೇಟಿ

ಲೋಕಬಂಧು ನ್ಯೂಸ್ ಕಾಪು, ಜು.2
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪುತ್ರ, ಕಲ್ಯಾಣ್ ಲೋಕಸಭಾ ಕ್ಷೇತ್ರದ ಸಂಸದ ಡಾ.ಶ್ರೀಕಾಂತ್ ಶಿಂಧೆ ಅವರು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರುಶನ ಪಡೆದರು.ದೇವಳದ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.


ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಶಿಂಧೆ ಅವರನ್ನು ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ಕೆ.ವಾಸುದೇವ ಶೆಟ್ಟಿ, ಪ್ರಬಂಧಕ ಗೋವರ್ಧನ್ ಸೇರಿಗಾರ್ ಮತ್ತು ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಮೊದಲಾದವರಿದ್ದರು.