ಮಣಿಪಾಲ ಪ್ರತಿಭಟನೆಯಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ

ಲೋಕಬಂಧು ನ್ಯೂಸ್ | ಮಣಿಪಾಲ, ಜು.30
ನೀಟ್ ಪ್ರಕರಣ ಸಂಬಂಧ ಮಣಿಪಾಲದಲ್ಲಿ ನಡೆದ ಪ್ರತಿಭಟನೆ ವೇಳೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿದ್ದು, ಆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಉಡುಪಿ ನಗರ ಬಿಜೆಪಿ ಯುವ ಮೋರ್ಚಾ ವತಿಯಿಂದ ಮಣಿಪಾಲ ಪೊಲೀಸರಿಗೆ ಮನವಿ ಸಲ್ಲಿಸಲಾಗಿದೆ.
ಉಡುಪಿ ನಗರ ಯುವ ಮೋರ್ಚಾ ಅಧ್ಯಕ್ಷ ಶ್ರೀವತ್ಸ ನೇತೃತ್ವದಲ್ಲಿ ಕಾರ್ಯಕರ್ತರು ಮಣಿಪಾಲ ಪೊಲೀಸ್‌ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ಅವರನ್ನು ಭೇಟಿ ಮಾಡಿ, ಪ್ರತಿಭಟನೆಯಲ್ಲಿ ಭಾಗವಹಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಸಂಬಂಧಿತರ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದರು.


ಪ್ರತಿಭಟನೆ ವೇಳೆ ಸರ್ಕಾರಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರ ಮುಂದೆ ಅಶಾಂತಿ ಉಂಟುಮಾಡುವ ಕೃತ್ಯ ಎಸಗಲಾಗಿದೆ ಹಾಗೂ ಭಾರತದ ಪ್ರಧಾನ ಮಂತ್ರಿ ವಿರುದ್ಧ ಅವಾಚ್ಯ ಮತ್ತು ಅವಹೇಳನಕಾರಿ ಪದಗಳನ್ನು ಬಳಸಲಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.


ಈ ಸಂದರ್ಭದಲ್ಲಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಪ್ರಧಾನ ಕಾರ್ಯದರ್ಶಿ ಅಭಿರಾಜ್ ಸುವರ್ಣ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಗಣೇಶ್, ನಗರ ಯುವ ಮೋರ್ಚಾ ಉಪಾಧ್ಯಕ್ಷರಾದ ನಿಖಿಲ್‌ ಮಡಿವಾಳ, ಭೂಷಣ್ ಕುಮಾ‌ರ್ ಮತ್ತು ಶ್ರೀಕಾಂತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಿತಿನ್ ಪೈ, ಮಣಿಪಾಲದ ಪ್ರಸಾದ್ ಗಾಸ್ಕ‌ರ್, ಕಾರ್ಯದರ್ಶಿ ಹರ್ಷರಾಜ್, ಧನುಷ್ ಕಡಿಯಾಳಿ ಹಾಗೂ ದೀಕ್ಷಿತ್ ಶೆಟ್ಟಿ ಉಪಸ್ಥಿತರಿದ್ದರು.