ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮಹಾಅಪರಾಧ

ಲೋಕಬಂಧು ನ್ಯೂಸ್  ಉಡುಪಿ, ಜು.21
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮಹಾ ಅಪರಾಧ ಎಂದು ಕರೆದಿರುವ ಪ್ರಧಾನಿ ನರೇಂದ್ರ ಮೋದಿ, ಪ್ರಶ್ನೆ ಪತ್ರಿಕೆ ಸೋರಿಕೆ ಬಯಲಾಗುತ್ತಿದ್ದಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಮತ್ತೆಂದೂ ಮರುಕಳಿಸಬಾರದು ಎಂದಿದ್ದಾರೆ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಪ್ರಕರಣದಲ್ಲಿ ಭಾಗಿಯಾದವರನ್ನೆಲ್ಲ ಬಂಧಿಸಲಾಗಿದೆ. ಸದ್ಯ 13 ಮಂದಿ ಕಸ್ಟಡಿಯಲ್ಲಿದ್ದಾರೆ ಎಂದು ಹೇಳಿದ್ದಾರೆ.


ನೀಟ್ ಪ್ರಶ್ನೆ ಪತ ಸೋರಿಕೆ ಪ್ರ ಬಯಲಾಗುತ್ತಿದ್ದಂತೆ ಸರ್ಕಾರ ಕ್ರಮ ಕೈಗೊಂಡಿದ್ದು, 13 ಜನರನ್ನು ಬಂಧಿಸಿ ಜೈಲಿಗಟ್ಟಲಾಗಿದೆ ಎಂದು ಕೇಂದ್ರದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಆಕಾಂಕ್ಷಿಗಳ ಭವಿಷ್ಯದ ಸುರಕ್ಷತೆ ದೃಷ್ಟಿಯಿಂದ ಮರುಪರೀಕ್ಷೆ ನಡೆಸಿ ಫಲಿತಾಂಶ ನೀಡಲಾಗಿದೆ ಎಂದಿದ್ದಾರೆ.

ಇನ್ನೆಂದೂ ಇಂತಹ ಘಟನೆ ನಡೆಯಬಾರದೆಂಬ ಉದ್ದೇಶದಿಂದಲೇ ಸರ್ಕಾರ ತ್ವರಿತ ಕ್ರಮಕೈಗೊಂಡಿದೆ. ಅಪರಾಧಿಗಳಿಗೆ ಸಾಧ್ಯವಾದಷ್ಟೂ ಕಠಿಣ ಶಿಕ್ಷೆಗೆ ಪ್ರಧಾನಿ ಸೂಚಿಸಿದ್ದಾರೆ. ಆಗ ಮಾತ್ರ, ಭವಿಷ್ಯದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಗೆ ತಡೆ ಹಾಕಬಹುದು ಮತ್ತು ಪರೀಕ್ಷೆಗಳ ಘನತೆ ಕಾಪಾಡಬಹುದು ಎಂದಿದ್ದಾರೆ.