ಲೋಕಬಂಧು ನ್ಯೂಸ್ ಉಡುಪಿ, ಜು.11
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಯ ಮೀನುಗಾರರ ವಿಭಾಗದ ಮಹಿಳಾ ವಿಭಾಗದ ಜಿಲ್ಲಾಧ್ಯಕ್ಷೆಯಾಗಿ ನಿರೀಕ್ಷಾ ಮೆಂಡನ್ ಕಿನ್ನಿಮೂಲ್ಕಿ ನೇಮಕಗೊಂಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಆದೇಶ ಮತ್ತು ಅಖಿಲ ಭಾರತ ಮೀನುಗಾರರ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಅನುಮೋದನೆ ಮೇರೆಗೆ ರಾಜ್ಯಾಧ್ಯಕ್ಷ ಮಂಜುನಾಥ ಸುಣಗಾರ ಅವರು ಈ ನೇಮಕಾತಿ ಮಾಡಿದ್ದಾರೆ.
ನಿರೀಕ್ಷಾ ಮೆಂಡನ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.ಇದೀಗ ಮೀನುಗಾರರ ವಿಭಾಗದ ಉಡುಪಿ ಜಿಲ್ಲಾ ಮಹಿಳಾ ವಿಭಾಗದ ನೇತೃತ್ವ ವಹಿಸಿದ್ದಾರೆ.
