ಲೋಕಬಂಧು ನ್ಯೂಸ್ ಉಡುಪಿ, ಜು.29
ಮಂಗಳವಾರ ಬಿಜೆಪಿ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಕಾಕ್ರೋಚ್ ಮತ್ತು ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರಿಗೆ ಉಡುಪಿ ನಗರ ಪೊಲೀಸರು ಬುಧವಾರ ಶಾಸಕರ ಮನೆಗೆ ತೆರಳಿ ನೋಟಿಸ್ ಜಾರಿ ಮಾಡಿದ್ದಾರೆ.ಶಾಸಕ ಯಶಪಾಲ್ ಅವರು ನೋಟಿಸ್ ಸ್ವೀಕರಿಸಿದ್ದಾರೆ.
ಪ್ರಕರಣ ಸಂಬಂಧ ಶಾಸಕ ಯಶಪಾಲ್ ಸುವರ್ಣ ಹಾಗೂ ಅವರ ಮನೆ ಮತ್ತು ಕಚೇರಿಗೆ ಪೊಲೀಸ್ ಭದ್ರತೆ ನೀಡಲಾಗಿದೆ.