ಪ್ರಾಂಶುಪಾಲೆ ಡಾ.ನಿಕೇತನ ಅಧಿಕಾರ ಸ್ವೀಕಾರ

ಲೋಕಬಂಧು | ನ್ಯೂಸ್ ಉಡುಪಿ, ಜು.22
ಅಜ್ಜರಕಾಡು ಡಾ.ಜಿ. ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲೆಯಾಗಿ ಕನ್ನಡ ವಿಭಾಗ ಮುಖ್ಯಸ್ಥೆ ಡಾ.ನಿಕೇತನ ಅಧಿಕಾರ ಸ್ವೀಕರಿಸಿದರು.
ನಿಕಟಪೂರ್ವ ಪ್ರಾಂಶುಪಾಲ ಪ್ರೊ.ಸೋಜನ್ ಕೆ.ಜಿ. ಅಧಿಕಾರ ಹಸ್ತಾಂತರಿಸಿದರು.


ಚಿಂತಕಿ, ಲೇಖಕಿಯಾಗಿರುವ ಡಾ.ನಿಕೇತನ ಅವರು ಎನ್.ಎಸ್.ಎಸ್. ರಾಜ್ಯ ಪ್ರಶಸ್ತಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಪುರಸ್ಕಾರದೊಂದಿಗೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.


ಈ ಹಿಂದೆ ಅವರು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಹಿರಿಯಡ್ಕ ಸರ್ಕಾರಿ ಕಾಲೇಜಿನಲ್ಲಿ ಪ್ರಾಂಶುಪಾಲೆಯಾಗಿ ಕಾರ್ಯನಿರ್ವಹಿಸಿದ್ದರು.