ಕ್ರೈಸ್ಟ್ ಶಾಲಾ ಬಸ್ ಪಲ್ಟಿ: ಏಳು ಮಂದಿಗೆ ಗಾಯ

ಲೋಕಬಂಧು ನ್ಯೂಸ್ | ಮಣಿಪಾಲ, ಜು.10
ಖಾಸಗಿ ಶಾಲಾ ಬಸ್ ಪಲ್ಟಿಯಾಗಿ ಓರ್ವ ವಿದ್ಯಾರ್ಥಿನಿ ಗಂಭೀರ ಗಾಯಗೊಂಡು ಏಳು ಮಂದಿ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಶುಕ್ರವಾರ ಮಣಿಪಾಲ ಠಾಣಾ ವ್ಯಾಪ್ತಿಯ ಸರಳಬೆಟ್ಟು ಕೊಡಂಗೆ ದೇವಸ್ಥಾನದ ಬಳಿ ಸಂಭವಿಸಿದೆ.
ಕ್ರೈಸ್ಟ್ ಶಾಲೆಗೆ ಸೇರಿದ ಬಸ್ ಇದಾಗಿದ್ದು, ಕೊಡಂಗೆ ದೇವಸ್ಥಾನ ಸಮೀಪ ಬಸ್ಸನ್ನು ರಿವರ್ಸ್ ತೆಗೆಯುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ಸು ಉರುಳಿ ಬಿದ್ದಿದೆ.
ಘಟನೆಯಲ್ಲಿ ಓರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿದ್ದು, ಏಳು ಮಂದಿ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.


ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಸ್ಥಳಕ್ಕೆ ಮಣಿಪಾಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ