ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ರಕ್ಷಿಸಕೂಡದು

ಲೋಕಬಂಧು ನ್ಯೂಸ್ ಬೆಂಗಳೂರು, ಜು.24

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಈಗ ಮಾತನಾಡುವ ಬದಲು ಪ್ರಾರಂಭದಲ್ಲೇ ಮಾತನಾಡಬೇಕಿತ್ತು ಎಂದಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು ಎಂದು ಆಗ್ರಹಿಸಿದ್ದಾರೆ.ಕೆ.ಜಿ. ರಸ್ತೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ಮಕ್ಕಳೂ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ದೇಶದ ಯುವ ಜನತೆಯ ಭವಿಷ್ಯ ಹಾಳಾಗುತ್ತಿದೆ. ಒಬ್ಬ ವ್ಯಕ್ತಿ ರಾಜಿನಾಮೆ ಕೊಡುವುದರಿಂದ ಏನಾಗಲಿದೆ ಎಂದು ಕಿಡಿಕಾರಿದರು.