ಸಿಎಂ ಮಾಧ್ಯಮ ಕಾರ್ಯದರ್ಶಿ ಹುದ್ದೆಯಿಂದ ರಾಘವೇಂದ್ರ ಭಟ್ ತೆರವು

ಲೋಕಬಂಧು ನ್ಯೂಸ್ ಬೆಂಗಳೂರು, ಜು.14
ಸಿಎಂ ಮಾಧ್ಯಮ ಕಾರ್ಯದರ್ಶಿ-3 ಹುದ್ದೆಗೆ ನೇಮಕವಾಗಿದ್ದ ರಾಘವೇಂದ್ರ ಭಟ್ ಅವರ ನೇಮಕಾತಿ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತಿನಲ್ಲಿರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಜುಲೈ 8ರಂದು ಮಾಧ್ಯಮ ಕಾರ್ಯದರ್ಶಿ-1 ಹುದ್ದೆಗೆ ಟಿ. ತ್ಯಾಗರಾಜ್, ಮಾಧ್ಯಮ ಕಾರ್ಯದರ್ಶಿ-2 ಹುದ್ದೆಗೆ ಆರ್.ಜಯಪ್ರಕಾಶ್ ಮತ್ತು ಮಾಧ್ಯಮ ಕಾರ್ಯದರ್ಶಿ-3 ಹುದ್ದೆಗೆ ರಾಘವೇಂದ್ರ ಭಟ್ ಅವರನ್ನು ನೇಮಕ ಮಾಡಲಾಗಿತ್ತು. ಆದರೆ, ಈಗ ರಾಘವೇಂದ್ರ ಭಟ್ ನೇಮಕಾತಿಯನ್ನು ವಾಪಸ್ ಪಡೆದಿರುವುದಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ನೂತನ ಅಧಿಸೂಚನೆ ಹೊರಡಿಸಿದೆ.


ರಾಘವೇಂದ್ರ ಭಟ್ ನೇಮಕಾತಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಅವರು ಈ ಹಿಂದೆ ಸಾಮಾಜಿಕ ಮಾಧ್ಯಮಗಳಲ್ಲಿ ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿ ವಿರುದ್ಧ ಟೀಕಿಸಿದ್ದರು ಎನ್ನಲಾದ ಪೋಸ್ಟ್ ಇತ್ತೀಚೆಗೆ ವೈರಲ್ ಆಗಿತ್ತು. ಅದರ ಬೆನ್ನಲ್ಲೇ ಸರ್ಕಾರ ಭಟ್ ನೇಮಕಾತಿಯನ್ನು ಅಮಾನತಿನಲ್ಲಿರಿಸಿ ಆದೇಶ ಹೊರಡಿಸಿದೆ.