ರಾಮ ಮಂದಿರ ಆರ್‌ಎಸ್‌ಎಸ್-ಬಿಜೆಪಿಗೆ ಭಕ್ತಿಯ ಸಂಕೇತವಾಗಿರಲಿಲ್ಲ

ಲೋಕಬಂಧು ನ್ಯೂಸ್ ಬೆಂಗಳೂರು,ಜು.7
ಅಯೋಧ್ಯೆಯ ರಾಮ ಮಂದಿರ ದೇಣಿಗೆ ದುರ್ಬಳಕೆ ಆರೋಪದ ನಡುವೆಯೇ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.ರಾಮ ಮಂದಿರ ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಎಂದಿಗೂ ಭಕ್ತಿಯ ಸಂಕೇತವಾಗಿರಲಿಲ್ಲ. ಅದು ಕೇವಲ ರಾಜಕೀಯ, ಅಧಿಕಾರ ಮತ್ತು ಹಣ ಗಳಿಸುವ ಸಾಧನವಾಗಿತ್ತು ಎಂದು ಕಿಡಿಕಾರಿದ್ದಾರೆ.


ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಧಾನಿ ಮೋದಿ ಹಾಗೂ ಬಿಜೆಪಿ ತಮ್ಮ ಸಂಪೂರ್ಣ ರಾಜಕೀಯ ಅಸ್ತಿತ್ವವನ್ನೇ ರಾಮ ಮಂದಿರದ ವಿಚಾರದ ಮೇಲೆ ಕಟ್ಟಿಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.


ರಾಮ ಮಂದಿರದ ಹೆಸರಿನಲ್ಲಿ ಸಂಗ್ರಹಿಸಲಾದ ದೇಣಿಗೆ ದುರ್ಬಳಕೆ ಪ್ರಕರಣವನ್ನು ಉಲ್ಲೇಖಿಸಿರುವ ಅವರು, ಈ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಬಿಜೆಪಿ ಮತ್ತು ಆರ್‌ಎಸ್‌ಎಸ್ ರಕ್ಷಿಸುತ್ತಿವೆ ಎಂದು ಆರೋಪಿಸಿದರು.