ಬಾಲಗಣೇಶೋತ್ಸವ ಸುವರ್ಣ ಸಂಭ್ರಮದ ಮನವಿಪತ್ರ ಬಿಡುಗಡೆ

ಲೋಕಬಂಧು ನ್ಯೂಸ್ | ಉಡುಪಿ, ಜು.12
ಅಂಬಲಪಾಡಿ ಶ್ರೀ ಬಾಲಗಣೇಶೋತ್ಸವ ಸಮಿತಿಯ 50ನೇ ವರ್ಷ ಸುವರ್ಣ ಸಂಭ್ರಮದ ಮನವಿ ಪತ್ರವನ್ನು ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದಲ್ಲಿ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಎಚ್. ಜಯಪ್ರಕಾಶ್ ಕೆದ್ಲಾಯ ಹಾಗೂ ಸಮಿತಿ ಸದಸ್ಯರ ಉಪಸ್ಥಿತಿಯಲ್ಲಿ ಶ್ರೀದೇವರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಬಿಡುಗಡೆ ಮಾಡಲಾಯಿತು.