ಲೋಕಬಂಧು ನ್ಯೂಸ್ | ಉಡುಪಿ, ಜು.6
ಸಹಕಾರ ಸಪ್ತಾಹ ಆಚರಣೆ ಪ್ರಯುಕ್ತ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆ ಸಹಯೋಗದೊಂದಿಗೆ ಉಚಿತ ಆರೋಗ್ಯ ಶಿಬಿರ ನಗರದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದ ಮಿನಿ ಹಾಲ್‌ನಲ್ಲಿ ಭಾನುವಾರ ನಡೆಯಿತು.
ಉಡುಪಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಆಡಳಿತ ಮೊಕ್ತೇಸರ ನಾಗೇಶ್ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿದರು.
ಅಧ್ಯಕ್ಷತೆ ವಹಿಸಿದ್ದ ಬಡಗಬೆಟ್ಟು ಸೊಸೈಟಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಸಹಕಾರಿ ಸಂಘಗಳು ಕೇವಲ ಆರ್ಥಿಕ ವ್ಯವಹಾರಕ್ಕೆ ಸೀಮಿತವಾಗಿರದೆ ಜನರೊಂದಿಗೆ ಬೆರೆತು ಕಾರ್ಯಕ್ರಮಗಳನ್ನು ಮಾಡಬೇಕಾಗಿದೆ. ಜನರ ಸಂಕಷ್ಟದ ಸಂದರ್ಭದಲ್ಲಿ ಸ್ಪಂದಿಸಬೇಕು ಎಂದರು.
ಉಡುಪಿ ಪ್ರಸಾದ್ ನೇತ್ರಾಲಯದ ನೇತ್ರ ತಜ್ಞೆ ಡಾ.ಮೇಘನ, ಹಿರಿಯ ವಕೀಲ ಶಾಂತಾರಾಮ ಶೆಟ್ಟಿ, ಗುರು ನಿತ್ಯಾನಂದ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಸುರೇಶ್ ಶೆಟ್ಟಿ, ಜಿಲ್ಲಾ ಸಹಕಾರ ಯೂನಿಯನ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ಮಾತನಾಡಿದರು.
ಉಡುಪಿ ಬಂಟರ ಸಂಘದ ಅಧ್ಯಕ್ಷ ಪುರುಷೋತ್ತಮ ಪಿ. ಶೆಟ್ಟಿ, ಬಡಗಬೆಟ್ಟು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಉಪಾಧ್ಯಕ್ಷ ಜಾರ್ಜ್ ಸಾಮ್ಯುವೆಲ್, ನಿರ್ದೇಶಕರಾದ ಜಯಾ ಶೆಟ್ಟಿ, ಸದಾಶಿವ ನಾಯ್ಕ, ವಿನಯ ಕುಮಾರ್, ಪದ್ಮನಾಭ ನಾಯಕ್ ಮತ್ತು ಎಲ್.ಉಮನಾಥ್, ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಕುಮಾರ್ ಇದ್ದರು.
ಬಡಗಬೆಟ್ಟು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ. ಶೇರಿಗಾರ್ ಸ್ವಾಗತಿಸಿದರು. ಮಲ್ಪೆ ಶಾಖೆಯ ವ್ಯವಸ್ಥಾಪಕ ನವೀನ್ ಕುಮಾರ್ ನಿರೂಪಿಸಿ, ವಂದಿಸಿದರು.
ಉಡುಪಿ ಪ್ರಸಾದ್ ನೇತ್ರಾಲಯ, ನೇತ್ರಜ್ಯೋತಿ ಚಾರಿಟೆಬಲ್ ಟ್ರಸ್ಟ್ ಹಾಗೂ ಮೆಡಿಕ್ವೆಸ್ಟ್ ಹೆಲ್ತ್ ಕೇರ್ ಸಂಯುಕ್ತಾಶ್ರಯದಲ್ಲಿ ಉಚಿತ ನೇತ್ರ ತಪಾಸಣೆ, ಫಿಜಿಯೋಥೆರಪಿ ಹಾಗೂ ಉಚಿತ ರಕ್ತ ಸಕ್ಕರೆ ಅಂಶ ತಪಾಸಣೆ ನಡೆದಿದ್ದು, ಶಿಬಿರದಲ್ಲಿ ಅನೇಕ ಮಂದಿ ಪಾಲ್ಗೊಂಡಿದ್ದರು.
