ಶಾಲಾ ಬಸ್ ಅಪಘಾತ: ಗಾಯಾಳುವಿನ ಆರೋಗ್ಯ ವಿಚಾರಿಸಿದ ಶಾಸಕ

ಲೋಕಬಂಧು ನ್ಯೂಸ್ | ಉಡುಪಿ, ಜು.10
ಮಣಿಪಾಲದ ಖಾಸಗಿ ಶಿಕ್ಷಣ ಸಂಸ್ಥೆಯ ಶಾಲಾ ಬಸ್ ಅಪಘಾತಕ್ಕೀಡಾಗಿ ವಿದ್ಯಾರ್ಥಿಗಳು ಗಾಯಗೊಂಡ ಬಗ್ಗೆ ಮಾಹಿತಿ ತಿಳಿದ ಕೂಡಲೇ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯ ಆರೋಗ್ಯ ಸ್ಥಿತಿಯ ಬಗ್ಗೆ  ವೈದ್ಯರು ಹಾಗೂ ಪೋಷಕರೊಂದಿಗೆ ಮಾಹಿತಿ ಪಡೆದರು.
ಒಂದು ತಿಂಗಳ ಅವಧಿಯಲ್ಲಿ ಉಡುಪಿ ನಗರ ಭಾಗದಲ್ಲಿ 3 ಶಾಲಾ ಬಸ್ ಅಪಘಾತ ಪ್ರಕರಣ ವರದಿಯಾಗಿದ್ದು, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಶಿಕ್ಷಣ ಸಂಸ್ಥೆಗಳ ಪ್ರಮುಖರು ನಿಯಮಾವಳಿಗಳ ಪಾಲನೆಗೆ ವಿಶೇಷ ಆದ್ಯತೆ ನೀಡುವಂತೆ ತಿಳಿಸಿದರು.


ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ಕಾರ್ಯದರ್ಶಿ ಗುರುರಾಜ್ ಭಂಡಾರಿ, ಯುವ ಮೋರ್ಚಾ ಅಧ್ಯಕ್ಷ ಶ್ರೀವತ್ಸ ಪದಾಧಿಕಾರಿ ನಿತಿನ್ ಪೈ ಮೊದಲಾದವರಿದ್ದರು.