ಶಾಲಾ ಬಸ್ ಪಲ್ಟಿ: ಗಾಯಾಳು ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಿಯೋಗ

ಲೋಕಬಂಧು ನ್ಯೂಸ್ | ಉಡುಪಿ, ಜು.10
ಮಣಿಪಾಲದ ಕ್ರೈಸ್ಟ್ ಸ್ಕೂಲ್ ಬಸ್ ಮಗುಚಿ ಬಿದ್ದ ಪರಿಣಾಮ ಗಾಯಗೊಂಡು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯನ್ನು‌ ಕಾಂಗ್ರೆಸ್ ನಿಯೋಗ ಭೇಟಿಯಾಗಿ ಸಾಂತ್ವನ‌ ಹೇಳಲಾಯಿತು.
ಆಕೆಯ ಆರೋಗ್ಯದ ಬಗ್ಗೆ ವೈದ್ಯರನ್ನು ವಿಚಾರಿಸಿ, ಪುಟ್ಟ ಬಾಲಕಿ ಹಾಗೂ ಆಕೆಯ ಪೋಷಕರಿಗೆ ಧೈರ್ಯ‌ ನೀಡಲಾಯಿತು.
ನಂತರ ಕ್ರೈಸ್ಟ್ ಸ್ಕೂಲ್‌ಗೆ ಭೇಟಿ ನೀಡಿ ಅಲ್ಲಿನ ಮುಖ್ಯೋಪಾಧ್ಯಾಯಿನಿಯನ್ನು ಭೇಟಿಯಾಗಿ ಮುಂದೆ ಇಂಥ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕೆಂದು ತಿಳಿಸಲಾಯಿತು.


ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾದ ಸುಕೇಶ್ ಕುಂದರ್ ಮತ್ತು ಶರತ್ ಶೆಟ್ಟಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್ ಮಂಚಿ ಹಾಗೂ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಸಂಜಯ್ ಆಚಾರ್ಯ‌ ಇದ್ದರು.