ಯಕ್ಷ ಸಾಧಕ ಪ್ರಶಸ್ತಿಗೆ ಆಯ್ಕೆ

ಲೋಕಬಂಧು ನ್ಯೂಸ್ ಉಡುಪಿ, ಜು.21
ಪ್ರಸಿದ್ಧ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಹೆಗಡೆ ಯಲಗುಪ್ಪ ಅವರು ಬೇಳಂಜೆ ಸಂಜೀವ ಹೆಗ್ಡೆ ಟ್ರಸ್ಟ್ ಪ್ರಾಯೋಜಿತ ಇಂದ್ರಾಳಿ ಯಕ್ಷಗಾನ ಕೇಂದ್ರ ನೀಡುವ ಗುರು ಮಟಪಾಡಿ ವೀರಭದ್ರ ನಾಯಕ್ ಯಕ್ಷ ಸಾಧಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪ್ರಶಸ್ತಿ 25 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.


ಆಗಸ್ಟ್1ರಂದು ಉಡುಪಿ ಪುರಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಯಕ್ಷಗಾನ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.


ಪ್ರತಿಭಾವಂತ ಮತ್ತು ಜನಪ್ರಿಯ ಸ್ತ್ರೀವೇಷಧಾರಿಯಾದ ಸುಬ್ರಹ್ಮಣ್ಯ ಹೆಗಡೆ ಅವರು ಗುಂಡಬಾಳ, ಮಂದಾರ್ತಿ, ಮಾರಣಕಟ್ಟೆ, ಕಮಲಶಿಲೆ, ಸಾಲಿಗ್ರಾಮ, ಹೊಸನಗರ ಮೇಳಗಳಲ್ಲಿ ತಿರುಗಾಟ ಮಾಡಿ ಪ್ರಸ್ತುತ ಪೆರ್ಡೂರು ಮೇಳದಲ್ಲಿದ್ದಾರೆ. ಪ್ರಭಾವತಿ, ಮೇನಕೆ, ರಂಭೆ, ದಾಕ್ಷಾಯಣಿ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಯಕ್ಷಗಾನದಲ್ಲಿ ಹರಿವಾಣ ನೃತ್ಯ ಅವರ ವಿಶೇಷತೆಯಾಗಿದೆ.


ಯಕ್ಷಗಾನ ಹಾಡುಗಾರಿಕೆ ಹಾಗೂ ಪುರುಷವೇಷಗಳ ನಿರ್ವಹಣೆಯಲ್ಲೂ ಸೈಎನಿಸಿಕೊಂಡಿದ್ದಾರೆ.