ಲೋಕಬಂಧು ನ್ಯೂಸ್ | ಉಡುಪಿ, ಜು.3
ಕಲಾ ಪೋಷಕ ಮಟ್ಟಿ ಮುರಳೀಧರ ರಾವ್, ಅರ್ಥದಾರಿ ಪಂಡಿತ ಪೆರ್ಲ ಕೃಷ್ಣ ಭಟ್ ಮತ್ತು ಈ ವರ್ಷದಿಂದ ಹೊರನಾಡಿನ ಧರ್ಮಕರ್ತ ಭೀಮೇಶ್ವರ ಜೋಶಿ ಅಜ್ಜ ಡಿ.ಬಿ. ವೆಂಕಟಸುಬ್ಬಾ ಜೋಯಿಸ್ ನೆನಪಿನಲ್ಲಿ ಸ್ಥಾಪಿಸಿದ 'ಯಕ್ಷಗಾನ ಕಲಾರಂಗ ಪ್ರಶಸ್ತಿ'ಗೆ ಅನುಕ್ರಮವಾಗಿ ಡಾ.ಜಿ.ಕೆ. ಹೆಗಡೆ ಹೊನ್ನಾವರ, ಕೋಟೆ ರಾಮ ಭಟ್ ಕಾರ್ಕಳ ಮತ್ತು ವೆಂಕಟರಾಮ ಭಟ್ಟ ಸುಳ್ಯ ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ತಲಾ 20 ಸಾವಿರ ರೂ. ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ.
ಜು.11ರಂದು ಅಪರಾಹ್ನ 4 ಗಂಟೆಗೆ ಸಂಸ್ಥೆಯ ಐವೈಸಿ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಅದಕ್ಕೂ ಪೂರ್ವದಲ್ಲಿ ಅಪರಾಹ್ನ 1ರಿಂದ 4ರ ವರೆಗೆ ಪ್ರಸಿದ್ಧ ಕಲಾವಿದರ ಸಹಯೋಗದೊಂದಿಗೆ ಶ್ರೀರಂಗ ತುಲಾಭಾರ ತಾಳಮದ್ದಲೆ ನಡೆಯಲಿದೆ ಎಂದು ಸಂಸ್ಥೆ ಅಧ್ಯಕ್ಷ ಎಂ. ಗಂಗಾಧರ ರಾವ್ ಮತ್ತು ಕಾರ್ಯದರ್ಶಿ ಮುರಳಿ ಕಡೆಕಾರ್ ತಿಳಿಸಿದ್ದಾರೆ.
