ಲೋಕಬಂಧು ನ್ಯೂಸ್ ನವದೆಹಲಿ, ಜು.24
ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಆರೋಪಿಗಳಿಗೆ ಅತ್ಯಂತ ಕಠಿಣ ಶಿಕ್ಷೆಯಾಗಬೇಕು. ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿರುವ ಅಪರಾಧಿಗಳಿಗೆ ಯಾವುದೇ ಕಾರಣಕ್ಕೂ ವಿನಾಯಿತಿ ನೀಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.ಆಡಳಿತಾರೂಢ ಎನ್.ಡಿ.ಎ. ಸಂಸದೀಯ ಪಕ್ಷದ 'ಮಂಗಲ್ ಮಿಲನ್' ಸಭೆಯಲ್ಲಿ ಮಾತನಾಡಿದ ಅವರು, ನೀಟ್ ಮತ್ತು ಇತರ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಕುರಿತು ಅತ್ಯಂತ ಗಂಭೀರ ವಿಚಾರ ಎಂದರು.
ಪರೀಕ್ಷಾ ಪ್ರಕ್ರಿಯೆಯನ್ನು ಕಲುಷಿತಗೊಳಿಸಿ, ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುವ ಕಿಡಿಗೇಡಿಗಳಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪ್ರಧಾನಿ ಮೋದಿ ಸೂಚಿಸಿದ್ದಾರೆ.