ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಜುಲೈ 10ರಂದು ಬೆಳಿಗ್ಗೆ 11 ಗಂಟೆಗೆ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಕುರಿತು ಸಂವಾದ ಕಾರ್ಯಕ್ರಮವನ್ನು ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದೆ.
ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಭಾಗವಹಿಸಲಿದ್ದು, ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅಧ್ಯಕ್ಷತೆ ವಹಿಸುವರು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ತಿಳಿಸಿದ್ದಾರೆ.