ಲೋಕಬಂಧು ನ್ಯೂಸ್ ನವದೆಹಲಿ, ಜು.22
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುವ ಅಗತ್ಯವಿದೆ ಎಂಬುದನ್ನು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದ್ದು, ಯಾವ ಮಾದರಿಯ ತನಿಖೆ ನಡೆಸಬೇಕೆಂಬ ಕುರಿತು ಅಂತಿಮ ಆದೇಶ ಕಾಯ್ದಿರಿಸಿದೆ.ಸೌಜನ್ಯ ಅವರ ತಾಯಿ ಕುಸುಮಾವತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ನ್ಯಾ.ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ ಸಿಬಿಐ ತನಿಖೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ಯಾವ ಮಾದರಿ ತನಿಖೆ ನಡೆಸಬೇಕೆಂದು ಆದೇಶದಲ್ಲಿ ತಿಳಿಸುವುದಾಗಿ ಹೇಳಿದೆ.
ಹಾಗಾಗಿ ದೇಶದ ಗಮನ ಸೆಳೆದ ಸೌಜನ್ಯ ಪ್ರಕರಣದ ಮರುತನಿಖೆಗೆ ಸರ್ವೋಚ್ಛ ನ್ಯಾಯಾಲಯ ಸಹಮತ ವ್ಯಕ್ತಪಡಿಸಿರುವುದು ಗಮನಾರ್ಹ ವಿಚಾರವಾಗಿದೆ.