ಲೋಕಬಂಧು ನ್ಯೂಸ್ ಮಣಿಪಾಲ, ಜು.2
ಪೋಕ್ಸೊ ಪ್ರಕರಣದಲ್ಲಿ ಜೈಲು ಸೇರಿದ ಬೇಸರದಲ್ಲಿ ಯುವಕನೊಬ್ಬ ಮಣಿಪಾಲ ಕೆಎಂಸಿ ಕ್ಯಾಂಪಸ್ ಕಾರು ಪಾರ್ಕಿಂಗ್ ಶೆಡ್'ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಶಿವಮೊಗ್ಗ ಜಿಲ್ಲೆಯ ಸೊರಬ ನಿವಾಸಿ ಬಸವರಾಜ (25) ಮೃತಪಟ್ಟ ವ್ಯಕ್ತಿ.
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿ, ಜೈಲಿಗೆ ಹೋಗಿ ಜಾಮೀನಿನಲ್ಲಿ ಬಿಡುಗಡೆಯಾದ ಬಳಿಕ ವಿಪರೀತ ಮದ್ಯಪಾನ ಮಾಡುತ್ತಿದ್ದು, ಜೈಲಿಗೆ ಹೋದ ಬಗ್ಗೆ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.