ಎಸ್.ಜಾನಕಿ ನಿಧನ ನೋವುಂಟುಮಾಡಿದೆ

ಲೋಕಬಂಧು ನ್ಯೂಸ್ | ಬೆಂಗಳೂರು, ಜು.11
ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ನಿಧನದ ಸುದ್ದಿ ನೋವುಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಸಿದ್ದರಾಮಯ್ಯ ಖೇದ ವ್ಯಕ್ತಪಡಿಸಿದ್ದಾರೆ.
ಕನ್ನಡ ಭಾಷೆಯೂ ಸೇರಿದಂತೆ 20 ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದ, 6 ದಶಕಗಳ ಕಾಲ‌ ತಮ್ಮ ಕಂಠಸಿರಿಯ ಮೂಲಕ ಸಂಗೀತ ಸೇವೆಗೈದ ಮೇರು ಪ್ರತಿಭೆಯೊಂದು ನಮ್ಮನ್ನಗಲಿರುವುದು ಕಲಾ ಜಗತ್ತಿಗಾಗಿರುವ ತುಂಬಲಾರದ ನಷ್ಟ.


ಜಾನಕಿಯಮ್ಮನವರ ಧ್ವನಿಯಿಲ್ಲದ ಚಿತ್ರಗಳೇ ಅಪರೂಪ ಎನ್ನುವ ಕಾಲವೊಂದಿತ್ತು. ಆ ಮಟ್ಟಿನ ಬೇಡಿಕೆಯನ್ನು ತಮ್ಮ ಅನನ್ಯ ಕಂಠದ ಮೂಲಕ ಸೃಷ್ಟಿಸಿದ್ದ ಸಂಗೀತ ಶಾರದೆಯ ವರಪುತ್ರಿ ಅವರು.


ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ. ಅವರ ಕುಟುಂಬ ವರ್ಗ ಮತ್ತು ಕೋಟ್ಯಂತರ ಸಂಗೀತ ಪ್ರಿಯರಿಗೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿದ್ದರಾಮಯ್ಯ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.