ಲೋಕಬಂಧು ನ್ಯೂಸ್ ಮುಂಬೈ, ಜು.7
ಭಾರೀ ಮಳೆಯಿಂದಾಗಿ ಮುಂಬೈ-ಪುಣೆ ಎಕ್ಸ್‌ಪ್ರೆಸ್ ವೇಯಲ್ಲಿ ಸುಮಾರು ರೂ. 7 ಸಾವಿರ ಕೋ.ರೂ. ವೆಚ್ಚದಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ಮಿಸ್ಸಿಂಗ್ ಲಿಂಕ್ ಸುರಂಗದ ಒಂದು ಭಾಗ ಕುಸಿದು ಬಿದ್ದಿದೆ. ಪರಿಣಾಮವಾಗಿ ಸೋಮವಾರ ಮಹಾರಾಷ್ಟ್ರದ ಅತ್ಯಂತ ಜನನಿಬಿಡ ಹೆದ್ದಾರಿಗಳಲ್ಲಿ ಒಂದಾದ ಈ ಹೆದ್ದಾರಿಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಸಾವಿರಾರು ಪ್ರಯಾಣಿಕರು ಆಹಾರ, ನೀರು ಇಲ್ಲದೆ ಗಂಟೆಗಳ ಕಾಲ ರಸ್ತೆಯಲ್ಲೇ ಸಿಲುಕಿಕೊಂಡರು.