ಲೋಕಬಂಧು ನ್ಯೂಸ್ | ಉಜಿರೆ, ಜು.3
ರಾಜ್ಯದ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಗುರುವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು,ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು, ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
