ಲೋಕಬಂಧು ನ್ಯೂಸ್ ಬೆಳಗಾವಿ, ಜು.9
ದೇವಸ್ಥಾನಗಳ ಹುಂಡಿ, ಚಿನ್ನ ಮತ್ತು ಬೆಳ್ಳಿ ವಸ್ತುಗಳ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.ಗುರುವಾರ ಹಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿರುವ ಅವರು, ಅಯೋಧ್ಯೆ ರಾಮ ಮಂದಿರದಲ್ಲೇ ನಡೆದ ಕಳ್ಳತನ ಅವಮಾನಕರ. ಆ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಪ್ರಮುಖ ದೇವಸ್ಥಾನಗಳಲ್ಲಿ 24 ಗಂಟೆಯೂ ಕಾರ್ಯನಿರ್ವಹಿಸುವ ಸಿಸಿ ಟಿವಿ ವ್ಯವಸ್ಥೆ ಅಳವಡಿಸಲು ಸೂಚಿಸಲಾಗಿದೆ. ಹುಂಡಿ ತೆರೆಯುವುದು, ಹಣ ಹೊರ ತೆಗೆಯುವುದು, ಎಣಿಕೆ ಮಾಡುವುದು ಮತ್ತು ಪುನಃ ಬೀಗ ಹಾಕುವ ವರೆಗಿನ ಸಂಪೂರ್ಣ ಪ್ರಕ್ರಿಯೆ ಕ್ಯಾಮೆರಾದಲ್ಲಿ ದಾಖಲಾಗಬೇಕು. ದೃಶ್ಯಾವಳಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಸಂಬಂಧಪಟ್ಟ ಪೊಲೀಸ್ ವೃತ್ತನಿರೀಕ್ಷಕರು ಹಾಗೂ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಗೆ ಸಂಪರ್ಕಿಸುವಂತೆ ನಿರ್ದೇಶನ ನೀಡಲಾಗಿದೆ ಎಂದರು.