ಆ.12: ಮಣಿಪಾಲದಲ್ಲಿ `ತಿರಂಗಾ ಯಾತ್ರೆ'- ದೇಶಕ್ಕಾಗಿ ದೇಶಭಕ್ತರ ನಡಿಗೆ

ಲೋಕಬಂಧು ನ್ಯೂಸ್ | ಉಡುಪಿ. ಆ.11
ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಉಡುಪಿಯ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಹಾಗೂ ಸಂಘಸಂಸ್ಥೆಗಳ ಸಹಯೋಗದಲ್ಲಿ ಆಗಸ್ಟ್ 12ರಂದು ಅಪರಾಹ್ನ 3.30ಕ್ಕೆ ತಿರಂಗಾ ಯಾತ್ರೆ- ದೇಶಕ್ಕಾಗಿ  ದೇಶಭಕ್ತರ ನಡಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ತಿಳಿಸಿದ್ದಾರೆ.
ಮಣಿಪಾಲ ಕೆನರಾ ಬ್ಯಾಂಕಿನ ಪ್ರಾದೇಶಿಕ ಕಚೇರಿ ಮುಂಭಾಗದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಸಹಕಾರಿ ಕ್ಷೇತ್ರದ ವಿವಿಧ ಗಣ್ಯರು ತಿರಂಗಾ ಯಾತ್ರೆಗೆ ಚಾಲನೆ ನೀಡಲಿದ್ದಾರೆ.
ಯಾತ್ರೆ ಮಣಿಪಾಲ ಕೆನರಾ ಬ್ಯಾಂಕಿನ ಪ್ರಾದೇಶಿಕ ಕಚೇರಿ ಮುಂಭಾಗದಿಂದ ಆರಂಭಗೊಂಡು ಟೈಗರ್ ಸರ್ಕಲ್, ಸಿಂಡಿಕೇಟ್ ಸರ್ಕಲ್ ಮೂಲಕ ಸಾಗಿ ಜಿಲ್ಲಾಧಿಕಾರಿ ಕಚೇರಿ ರಸ್ತೆಯ ಕಾಯಿನ್ ಸರ್ಕಲ್ ಬಳಿ ಸಮಾಪನಗೊಳ್ಳಲಿದೆ.