ಲೋಕಬಂಧು ನ್ಯೂಸ್ | ಉಡುಪಿ, ಆ.22
ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ದಾವಣಗೆರೆ ಬೇಗೂರು ರಸ್ತೆ ನಿವಾಸಿ ವಾಣಿಶ್ರೀ ಅಲಿಯಾಸ್ ರೇಣುಕಾ ಎಂಬಾಕೆಯನ್ನು ಉಡುಪಿ ನಗರ ಠಾಣೆ ಪೊಲೀಸರು ಬಂಧಿಸಿ, ಶುಕ್ರವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
2009ರ ಪ್ರಕರಣಕ್ಕೆ ಸಂಬಂಧಿಸಿ ಆಕೆ ಆರೋಪಿಯಾಗಿದ್ದು, ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆಯಲ್ಲಿ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಒಪ್ಪಿಸಲಾಗಿದೆ.
