ಲೋಕಬಂಧು ನ್ಯೂಸ್ ಉಡುಪಿ, ಆ.3
ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ ಎಂಬ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆಗಸ್ಟ್ 4ರಂದು ಮಂಗಳವಾರ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶಿಸಿದ್ದಾರೆ.
ಉಳಿದಂತೆ ಎಲ್ಲಾ ಪದವಿ ಪೂರ್ವ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿಲ್ಲ.
