ಲೋಕಬಂಧು ನ್ಯೂಸ್ ಉಡುಪಿ, ಆ.4
ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆ, ನಿಯಮ ಪಾಲನೆ ಮಾಡದ ಖಾಸಗಿ ಬಸ್'ಗಳ ವಿರುದ್ಧ ಉಡುಪಿ ಜಿಲ್ಲೆಯ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ 15 ಪ್ರಕರಣ ಹಾಗೂ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಒಟ್ಟು 8 ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಉಡುಪಿ ಅರ್‌ಟಿಓ ಮತ್ತು ಪೊಲೀಸ್ ಇಲಾಖೆ ಸಂಯುಕ್ತವಾಗಿ ದಾಳಿ ನಡೆಸಿ ಒಟ್ಟು 11,50೦ ರೂ. ದಂ ವಸೂಲಿ ಮಾಡಲಾಗಿದೆ.
ಕಾರ್ಯಾಚರಣೆ ಮುಂದುವರಿಸಲಾಗುವುದು ಎಂದು ಎಸ್.ಪಿ.ಹರಿರಾಮ್ ಶಂಕರ್ ತಿಳಿಸಿದ್ದಾರೆ.