ನಾಗೇಂದ್ರ ರಾಜೀನಾಮೆ ಅಂಗೀಕರಿಸದಿದ್ದಲ್ಲಿ ಮತ್ತೆ ಹೋರಾಟ

ಲೋಕಬಂಧು ನ್ಯೂಸ್ | ಹುಬ್ಬಳ್ಳಿ, ಆ.29
ಬಿ. ನಾಗೇಂದ್ರ ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಳಂಬ ಮಾಡದೆ ಕೂ ಡಲೇ ಅಂಗೀಕರಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ಅಂಗೀಕರಿಸದಿದ್ದಲ್ಲಿ ಬಿಜೆಪಿಯಿಂದ ಮತ್ತೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.


ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದಲ್ಲಿ ಮುಳುಗಿಹೋಗಿದೆ. ರಾಜ್ಯ ಸರ್ಕಾರವನ್ನು ಕಾಂಗ್ರೆಸ್ ಹೈಕಮಾಂಡ್ ಎಟಿಎಂ ಮಾಡಿಕೊಂಡಿದೆ. ಅದರ ಫಲವಾಗಿಯೇ ನಾಗೇಂದ್ರ ಮತ್ತೊಮ್ಮೆ ಸಚಿವರಾಗಿದ್ದರು.


ಡೆತ್‌ನೋಟ್‌ನಲ್ಲಿ ನಾಗೇಂದ್ರ ಹೆಸರಿತ್ತು, ಅವರ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆಯಾಗಿತ್ತು. ಆದರೂ ಅವರಿಗೆ ಮತ್ತೊಮ್ಮೆ ಸಚಿವ ಸ್ಥಾನ ನೀಡಲಾಯಿತು. ಈ ನಿಟ್ಟಿನಲ್ಲಿ ಸಿಬಿಐ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಬರೆಯಲಾಗಿತ್ತು.


ಬಿಜೆಪಿ ಮತ್ತು ಜೆಡಿಎಸ್‌ನ ಸಂಘಟಿತ ಹೋರಾಟಕ್ಕೆ ಮಣಿದು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ವಿಳಂಬ ಮಾಡದೆ ರಾಜೀನಾಮೆ ಅಂಗೀಕರಿಸಬೇಕು, ಇಲ್ಲದಿದ್ದಲ್ಲಿ ಮತ್ತೆ ಹೋರಾಟ ಅನಿವಾರ್ಯ ಎಂದು ಪ್ರಹ್ಲಾದ್ ಜೋಶಿ ಎಚ್ಚರಿಕೆ ‌ನೀಡಿದ್ದಾರೆ.