ಕೃಷ್ಣಮಠಕ್ಕೆ ಅಲೋಕ್ ಕುಮಾರ್ ಭೇಟಿ

ಲೋಕಬಂಧು ನ್ಯೂಸ್ | ಉಡುಪಿ, ಆ.8
ವಿಶ್ವ ಹಿಂದೂ ಪರಿಷತ್ತಿನ ಅಂತರರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಶುಕ್ರವಾರ ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದರು.
ದೇವರ ದರ್ಶನದ ಬಳಿಕ ಪರ್ಯಾಯ ಶೀರೂರು ಶ್ರೀ ವೇದವರ್ಧನತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.
ಈ ಸಂದರ್ಭದಲ್ಲಿ ಮಠದ ದಿವಾನ ಡಾ. ಉದಯಕುಮಾರ್ ಸರಳತ್ತಾಯ ಹಾಗೂ ವಿಹಿಂಪ ಪ್ರಾಂತ ಸಹಬಕಾರ್ಯದರ್ಶಿ ಶರಣ್ ಕುಮಾರ್ ಪಂಪ್'ವೆಲ್, ವಿಹಿಂಪ ಉಡುಪಿ ಜಿಲ್ಲಾ ಕಾರ್ಯಾಧ್ಯಕ್ಷ ಸುನಿಲ್ ಕೆ.ಆರ್., ಅಧ್ಯಕ್ಷ ವಿಷ್ಣುಮೂರ್ತಿ ಆಚಾರ್ಯ, ಕಾರ್ಯದರ್ಶಿ ದಿನೇಶ್ ಮೆಂಡನ್, ಸಂಯೋಜಕ ಚೇತನ್ ಪೇರಲ್ಕೆ, ಬಿಜೆಪಿ ಜಿಲ್ಲಾ ವಕ್ತಾರ ಮಧುಕರ ಮುದ್ರಾಡಿ, ಪೊಳಲಿ ಗಿರಿಪ್ರಕಾಶ ತಂತ್ರಿ ಮೊದಲಾದವರಿದ್ದರು.