ಪುಷ್ಪಾನಂದ ಫೌಂಡೇಶನ್ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಲೋಕಬಂಧು ನ್ಯೂಸ್ | ಉಡುಪಿ, ಆ.4
2025- 26ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಗಳಿಸಿದ ಉಡುಪಿ ವಿಧಾನಸಭೆ ಕ್ಷೇತ್ರದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ  ಪುಷ್ಪಾನಂದ ಫೌಂಡೇಶನ್ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಫೌಂಡೇಶನ್ ಪ್ರವರ್ತಕ, ಶಾಸಕ ಯಶಪಾಲ್ ಎ.ಸುವರ್ಣ ತಿಳಿಸಿದ್ದಾರೆ.
ಉಡುಪಿ ನಗರಸಭೆ ಹಾಗೂ ಗ್ರಾ.ಪಂ. ವ್ಯಾಪ್ತಿಯ ವಿದ್ಯಾರ್ಥಿಗಳು ಈ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬಹುದು.


ಅರ್ಜಿ ಪ್ರತಿಗಳು ಉಡುಪಿಯ 'ಸ್ವರಾಷ್ಟ್ರ ಸೇವಾ' ಶಾಸಕರ ಕಚೇರಿ ಹಾಗೂ ಬ್ರಹ್ಮಾವರ ತಾಲೂಕು ಕಚೇರಿಯ ಶಾಸಕರ ಕಾರ್ಯಾಲಯದಲ್ಲಿ ಲಭ್ಯವಿದೆ. ಅರ್ಜಿ ಸಲ್ಲಿಸ ಲು ಆ.31 ಕೊನೆಯ ದಿನವಾಗಿದೆ ಎಂದು ಶಾಸಕ ಯಶಪಾಲ್ ತಿಳಿಸಿದ್ದಾರೆ.