ಲೋಕಬಂಧು ನ್ಯೂಸ್ ಉಡುಪಿ, ಆ.30
ಇಲ್ಲಿನ ರಥಬೀದಿಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಗುರುಸಾರ್ವಭೌಮರ 355ನೇ ಆರಾಧನೆ ಪ್ರಯುಕ್ತ ಪರ್ಯಾಯ ಶೀರೂರು ಶ್ರೀ ವೇದವರ್ಧನತೀರ್ಥ ಶ್ರೀಪಾದರು ಭಾನುವಾರ ರಾಯರ ವೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದರು.ಬಳಿಕ ಪಲ್ಲಪೂಜೆ ನೆರವೇರಿಸಿದರು.ಮಠದ ವ್ಯವಸ್ಥಾಪಕ ಜಯತೀರ್ಥ ಆಚಾರ್ಯ ಇದ್ದರು.