ಆ.17: ದ.ಕ, ಉಡುಪಿ ಜಿಲ್ಲೆಗಳಲ್ಲಿ ನಾಗರ ಪಂಚಮಿ ಸಾರ್ವತ್ರಿಕ ರಜೆ

ಲೋಕಬಂಧು ನ್ಯೂಸ್ | ಮಂಗಳೂರು, ಆ.16
ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17 ಸೋಮವಾರದಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ದ.ಕ. ಮತ್ತು ಉಡುಪಿ ಜಿಲ್ಲಾಧಿಕಾರಿಗಳ ಪ್ರಕಟನೆ ತಿಳಿಸಿದೆ.


ನಾಗರ ಪಂಚಮಿ ಹಬ್ಬಕ್ಕೆ ರಜಾ ಘೋಷಿಸುವಂತೆ ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಹಾಗೂ ಉಡುಪಿ ಶಾಸಕ ಯಶಪಾಲ್ ಸುವರ್ಣ ಜಿಲ್ಲಾಡಳಿತಕ್ಕೆ ಮನವಿ‌ ಮಾಡಿದ್ದರು.