ಬಡಗಬೆಟ್ಟು ಸೊಸೈಟಿ ಉಪಾಧ್ಯಕ್ಷ ಜಾರ್ಜ್ ಸಾಮ್ಯುಯೆಲ್ ನಿಧನ

ಲೋಕಬಂಧು ನ್ಯೂಸ್ ಉಡುಪಿ, ಆ.22
ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಉಪಾಧ್ಯಕ್ಷ ಜಾರ್ಜ್ ಸಾಮ್ಯುಯೆಲ್ (79) ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.
ಲಯನ್ಸ್ ಕ್ಲಬ್ ಉದ್ಯಾವರದ ಸಕ್ರಿಯ ಸದಸ್ಯರಾಗಿದ್ದ ಅವರು, ಲಯನ್ಸ್ ಜಿಲ್ಲೆ 317ಸಿಯ ಮಾಜಿ ಸಂಪುಟ ಕಾರ್ಯದರ್ಶಿಯಾಗಿದ್ದರು. ಪ್ರೊಟೆಸ್ಟೆಂಟ್ ಕ್ರೈಸ್ತ ಸಮುದಾಯದ ಮುಖಂಡರಾಗಿ ವಿವಿಧ ಸಾಮಾಜಿಕ ಹಾಗೂ ಸಮುದಾಯ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು.


ಅವರು ಪತ್ನಿ ಮತ್ತು ಮಕ್ಕಳನ್ನು ಅಗಲಿದ್ದಾರೆ.


ಜಾರ್ಜ್ ಸಾಮ್ಯುಯೆಲ್ ನಿಧನಕ್ಕೆ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಲಯನ್ಸ್ ಕ್ಲಬ್ ಸದಸ್ಯರು ಹಾಗೂ ಪ್ರೊಟೆಸ್ಟೆಂಟ್ ಕ್ರೈಸ್ತ ಸಮುದಾಯದ ಮುಖಂಡರು ಮತ್ತು ಸದಸ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.